ಜೆ.ಪಿ ನಡ್ಡಾ, ವಿಜಯೇಂದ್ರ, ಮಾಳವೀಯಾಗೆ ನೋಟಿಸ್

75

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎರಡು ಕೋಮುಗಳ ನಡುವೆ ದ್ವೇಷ ಉಂಟು ಮಾಡುವ ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಬಿಜೆಪಿ ಸಾಮಾಜಿಕ ಮಾಧ್ಯಮಗಳ ಉಸ್ತುವಾರಿ ಅಮಿತ್ ಮಾಳವೀಯಾಗೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಎಚ್ಚರ.. ಎಚ್ಚರ.. ಎಚ್ಚರ ಎನ್ನುವ ಬರಹದೊಂದಿಗೆ ಹಂಚಿಕೊಂಡ ಪೋಸ್ಟ್ ಎರಡು ಸಮುದಾಯಗಳ ನಡುವೆ ವೈಷಮ್ಯ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ದೂರು ನೀಡಿದ್ದರು.

ಮೇ 5ರಂದು ದೂರು ದಾಖಲಾಗಿದೆ. ಮೇ 6ರಂದು ಸಿಆರ್ ಪಿಸಿ 41(ಎ) ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!