ಬ್ರೇಕಿಂಗ್ ನ್ಯೂಸ್
Search

30 ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ

151

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿ ಪೊಲೀಸರು ಬುಧವಾರ ಮುಂಜಾನೆ ಕಾರ್ಯಾಚರಣೆ ನಡೆಸಿ 30 ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಮುಂದುವರೆದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಐವರು ಎಸಿಪಿ, 30 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಹಲವು ಕುಖ್ಯಾತ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ವಿಜಯನಗರ ರೌಡಿ ಶೀಟರ್ ರಾಘವೇಂದ್ರ ಪ್ರಸಾದ್ ಮನೆಯಲ್ಲಿ 2 ಲಾಂಗ್ ಸಿಕ್ಕಿವೆ. ಕೋತಿರಾಮ, ಟಾಮಿ, ಆರ್.ಟಿ ನಗರ ವೆಂಕಟೇಶ್ ಸೇರಿ 30 ಮಂದಿ ಸಿಕ್ಕಿಬಿದ್ದಿದ್ದಾರೆ. ವಿಲ್ಸನ್ ಗಾರ್ಡನ್ ನಾಗ ತಮಿಳುನಾಡಿಲ್ಲಿರುವುದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!