ಮೈತ್ರಿ ಪತನದ ಬಳಿಕ ರಾಜಕೀಯ ನಿವೃತ್ತಿ ಪರ್ವ

432

ಮೈಸೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾದ ದಿನಗಳಿಂದ ಒಬ್ಬೊಬ್ಬರಾಗಿ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತಿದ್ದಾರೆ. ಇದೀಗ ಮಾಜಿ ಸಚಿವ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತ್ನಾಡಿದ ಅವರು, ಐವತ್ತು ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಈಗಿನ ಪರಿಸ್ಥಿತಿಯಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಅಂತಾ ಹೇಳಿದ್ದಾರೆ.

ರಾಜಕೀಯ ಜೀವನದಲ್ಲಿ ಸಾಕಷ್ಟು ನೋವು ಅನುಭವಿಸಿದ್ದೇನೆ. ನನ್ನ ನೋವು ದೇವರಿಗೆ ಗೊತ್ತು. ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ನನ್ನ ನಿರ್ಧಾರ ತಿಳಿಸಿದ್ದೇನೆ ಅಂತಾ ಹೇಳಿದ್ರು. ಬಿಜೆಪಿಯಲ್ಲಿಯೂ ನನ್ಗೆ ಹಲವು ಜನ ಸ್ನೇಹಿತರಿದ್ದಾರೆ. ನಾನು ಸೋತಾಗ ಯಡಿಯೂರಪ್ಪನವರು, ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ರು. ಆದ್ರೆ, ನಾನು ಈಗ ಬಿಜೆಪಿಗೆ ಹೋಗುವುದಿಲ್ಲ ಅಂತಾ ತಿಳಿಸಿದ್ರು.

ನಿವೃತ್ತಿ ಮಾತು ಎತ್ತಿದವರು

ಅನರ್ಹ ಶಾಸಕರಾದ ಹೆಚ್.ವಿಶ್ವನಾಥ, ಎಂಟಿಬಿ ನಾಗರಾಜ, ಎಸ್.ಟಿ ಸೋಮಶೇಖರ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ರಾಜಕೀಯ ನಿವೃತ್ತಿ ಬಗ್ಗೆ ಮಾತ್ನಾಡಿದ್ದಾರೆ. ಹೀಗಾಗಿ ಇನ್ನೂ ಯಾರ್ಯಾರು ಚುನಾವಣಾ ರಾಜಕೀಯದಿಂದ ದೂರು ಉಳಿಯುತ್ತೇನೆ ಅಂತಾ ಘೋಷಣೆ ಮಾಡ್ತಾರೆ ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!