ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ಬಿ.ಎಲ್ ಶಂಕರ್ ರಾಜೀನಾಮೆ

200

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಬಿ.ಎಲ್ ಶಂಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇಲ್ಲಿಯವರೆಗೂ ತಾವು ಹಾಗೂ ಪ್ರತಿಷ್ಠಾನದ ಸದಸ್ಯರು ನೀಡಿರುವ ಸಹಕಾರಕ್ಕೆ ಆಭಾರಿಯಾಗಿದ್ದೇನೆ. ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ. ಕರ್ನಾಟಕ ಚಿತ್ರಕಲಾ ಅಕಾಡಮಿಯ ಅಧ್ಯಕ್ಷರಾಗಿ ಈ ವರ್ಷ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.

ತೇಜಸ್ವಿ ಬದುಕು, ಬರಹ, ಫೋಟೋಗ್ರಫಿ ಸೇರಿ ಅವರ ಚಿಂತನೆಗಳನ್ನು ಯುವ ಜನತೆಗೆ ತಿಳಿಸುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ತೇಜಸ್ವಿ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!