ವಿದ್ಯುತ್ ಸಮಸ್ಯೆ: ಬಿಜೆಪಿಯಿಂದ ಪ್ರತಿಭಟನೆ

274

ಪ್ರಜಾಸ್ತ್ರ ಸುದ್ದಿ

ಸಿಂದಗಿ: ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಸಮಸ್ಯೆಯನ್ನು ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಸವೇಶ್ವರ ವೃತ್ತದಿಂದ ತಾಲೂಕು ಆಡಳಿತ ಸೌಧದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.

ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರವಾಗಿದೆ. ಜನರಿಗೆ ಉಚಿತ ವಿದ್ಯುತ್ ಎಂದು ಹೇಳಿ ಈಗ ರಾಜ್ಯವನ್ನು ಕತ್ತಲಲ್ಲಿ ಮುಳುಗಿಸಿದೆ. ರೈತರಿಗೆ ಕನಿಷ್ಠ 5 ಗಂಟೆಗಳ ವಿದ್ಯುತ್ ಸಹ ನೀಡುತ್ತಿಲ್ಲ. ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಬೃಹತ್ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ ಹೇಳಿದರು.

ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಸರಿಯಾಗಿ ವಿದ್ಯುತ್ ನೀಡದ ಕಾರಣ ಹೊಲದಲ್ಲಿನ ಟಿಸಿಗಳು ಸುಟ್ಟು ಹೋಗುತ್ತಿವೆ. ಪಂಚ ರಾಜ್ಯ ಚುನಾವಣೆಗಾಗಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಉಡಿ ತುಂಬುವ ಕೆಲಸ ನಡೆದಿದೆ. ಅದನ್ನು ಬಿಟ್ಟು ರೈತರ ಸಮಸ್ಯೆಗೆ ಸ್ಪಂದಿಸಬೇಕು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ತಾಲೂಕು ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಪುರಸಭೆ ಜೆಡಿಎಸ್ ಸದಸ್ಯ ರಾಜಣ್ಣ ನಾರಾಯಣಕರ ಮಾತನಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಗಾನೂರದ ರೈತ ಮಹಿಳೆ ಪಾರ್ವತಿ ಕನ್ನೂರ ತಮ್ಮ ಸಮಸ್ಯೆ ಹೇಳಿಕೊಂಡರು. ನಂತರ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾ ಉಪಾಧ್ಯಕ್ಷ ರಾಜು ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಪೂಜಾರ, ಎಂ.ಎಸ್ ಮಠ, ಚಂದ್ರಶೇಖರ ಅಮಲಿಹಾಳ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಿಲ್ಪಾ ಕುದರಗೊಂಡ, ತಾಲೂಕಾಧ್ಯಕ್ಷೆ ನೀಲ್ಲಮ್ಮ ಯಡ್ರಾಮಿ, ಅನುಸೂಯ ಪಾರಗೊಂಡ, ಶಿವಕುಮಾರ ಬಿರಾದಾರ ಸೇರಿದಂತೆ ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!