ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದಾಗಿ ಜನರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇತ್ತ ಬಿಜೆಪಿ ನಾಯಕರು ಇಂಧನ ಸಚಿವ ಕೆ.ಜೆ ಜಾರ್ಜ್ ಕಾಣೆಯಾಗಿದ್ದಾರೆ. ಹುಡುಕಿಕೊಡಿ ಎಂದು ಪೋಸ್ಟರ್ ಮೂಲಕ ವಾಗ್ದಾಳಿ ನಡೆಸಿದೆ. ಇದಕ್ಕೆ ಸಚಿವ ಕೆ.ಜೆ ಜಾರ್ಜ್ ತಿರುಗೇಟು ನೀಡಿದ್ದಾರೆ.
ನಾನು ನಾಪತ್ತೆಯಾಗಿಲ್ಲ. ಕರ್ನಾಟಕವನ್ನು ಕತ್ತಲೆಗೆ ತಳ್ಳಿಲ್ಲ. ಬೆಳಕಿಗೆ ತಂದಿದ್ದೇವೆ. ಜನತೆಯನ್ನು ಕತ್ತಲೆಯಲ್ಲಿ ಇಟ್ಟ ಬಿಜೆಪಿಯನ್ನು ಜನರು ಪಾಠ ಕಲಿಸಿದ್ದಾರೆ. ಅಧಿಕಾರ ಕಳೆದುಕೊಂಡಿರುವ ಬಿಜೆಪಿ ನಾಯಕರು ಹತಾಷೆಯಲ್ಲಿ ಏನೇನು ಮಾತನಾಡುತ್ತಿದ್ದಾರೆ ಅಂತಾ ಪ್ರತ್ಯುತ್ತರ ನೀಡಿದರು.