ಸಿಂದಗಿಯ ಸ್ಲಂ, ಬಡ ನಿವಾಸಿಗಳಿಗಾಗಿ 250 ಮನೆ ಮಂಜೂರು: ಶಾಸಕ ಮನಗೂಳಿ

631

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿರುವ ಸ್ಲಂ ಹಾಗೂ ಬಡ ಕುಟುಂಬಗಳಿಗಾಗಿ, ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 250 ಮನೆಗಳನ್ನ ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಎಂ.ಸಿ ಮನಗೂಳಿ ತಿಳಿಸಿದ್ದಾರೆ.

ಒಟ್ಟು 1854.89 ಲಕ್ಷ ರೂಪಾಯಿ ಮೊತ್ತದಲ್ಲಿ 250 ಮನೆಗಳನ್ನ ಮಂಜೂರು ಮಾಡಲಾಗಿದೆ. ಇದಕ್ಕಾಗಿ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ್ಮೇಲೆ ಭೂಮಿ ಪೂಜೆ ನೆರವೇರಿಸಿ ಕಟ್ಟಡ ನಿರ್ಮಾಣ ಕಾಮಗಾರಿ ಶುರು ಮಾಡಲಾಗುವುದು ಎಂದು ತಿಳಿಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಶಾಸಕರ ಕಾರ್ಯಾಲಯಕ್ಕೆ ಭೇಟಿ ನೀಡಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!