ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ 35ನೇ ಹುಟ್ಟು ಹಬ್ಬಕ್ಕೆ ಅವರ ಹೊಸ ಸಿನಿಮಾ ಮಾಫಿಯಾ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರ ಜೊತೆಗೆ ಇತರೆ ಹೊಸ ಚಿತ್ರಗಳ ಪೋಸ್ಟರ್, ಫಸ್ಟ್ ಲುಕ್ ರಿಲೀಸ್ ಆಗಲಿವೆ. 15 ವರ್ಷಗಳ ಸಿನಿ ಜರ್ನಿಯಲ್ಲಿ ಇದು ಅವರ 30ನೇ ಚಿತ್ರವಾಗಿದೆ.
ಲೋಹಿತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಕುಮಾರ್ ಬಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಔಟ್ ಅಂಡ್ ಔಟ್ ಆಕ್ಷನ್ ಮೂವಿ ಆಗಿದ್ದು, ಬಹುತೇಕ ಶೂಟಿಂಗ್ ಮುಗಿದಿದೆ. ಎರಡು ಹಾಡು ಹಾಗೂ ಫೈಟ್ ಬಾಕಿ ಇದೆ ಎಂದು ಚಿತ್ರ ತಂಡ ತಿಳಿಸಿದೆ. ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದೆ.