ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನೂರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕಟ್ಟುನಿಟ್ಟನ ಕ್ರಮ ತೆಗೆದುಕೊಳ್ಳುವಂತೆ ಎಸ್ಐಟಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಪ್ರಕರಣ ಸಂಬಂಧ ಶನಿವಾರ ಎಸ್ಐಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಲ್ಲಿತನಕ ನಡೆದಿರುವ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದುಕೊಂಡರು. ನಿರ್ದಾಕ್ಷಿಣ್ಯವಾಗಿ ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳಿ, ಆದ್ರೆ ವಿಳಂಬವಾಗಬಾರದು ಎಂದಿದ್ದಾರೆ.
ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸಬಹುದು. ಇದರಿಂದ ತನಿಖೆಗೆ ಮತ್ತಷ್ಟು ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆದುಕೊಂಡು ಬರಲಾಗುವುದು ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ತಿಳಿಸಿದ್ದಾರೆ.