ಪ್ರಜ್ವಲ್ ಲೈಂಗಿಕ ಹಗರಣ, ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೂರ!

95

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಹಾಗೂ ಲೋಕಸಭಾ ಚುನಾವಣೆಯ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಭಾರೀ ಸದ್ದು ಮಾಡಿದೆ. ದೇಶ, ವಿದೇಶದಲ್ಲಿ ಇದು ಸುದ್ದಿಯಾಗಿದೆ. ಈ ಪ್ರಕರಣದಿಂದಾಗಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ತೀವ್ರ ಮುಜುಗರ ಅನುಭವಿಸುತ್ತಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು. ಇಡೀ ಘಟನೆ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಮುಂಬರುವ ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ನಿಂದ ಅಂತರ ಕಾಯ್ದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಇಷ್ಟು ಮಾತ್ರವಲ್ಲದೆ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಸಹ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುವ ಸಾಧ್ಯತೆ ತುಂಬಾ ಕಡಿಮೆಯಿದೆಯಂತೆ. ಪ್ರಜ್ವಲ್ ಪ್ರಕರಣದಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತೆ. ಹೀಗಾಗಿ ಮೈತ್ರಿ ಕುರಿತು ಮರುಚಿಂತನೆ ಮಾಡಬೇಕೆಂದು ಕೇಸರಿ ನಾಯಕರು ಹೇಳುತ್ತಿದ್ದಾರಂತೆ. ಸಧ್ಯ ಮೈತ್ರಿ ಚೆನ್ನಾಗಿದೆಯಂದು ತೋರಿಸುವ ಪ್ರಯತ್ನ ನಡೆದಿದೆ. ಆದರೆ ಆಂತರಿಕವಾಗಿ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದು, ಲೋಕಸಭಾ ಚುನಾವಣೆ ಬಳಿಕ ಕಮಲ ಹಾಗೂ ದಳ ಜೊತೆಯಾಗಿ ಹೋಗದೆ ದೂರವಾಗುವ ಸಾಧ್ಯತೆ ದಟ್ಟವಾಗಿದೆಯಂತೆ. ಅದೇನೇ ಇರಲಿ ಬಿಜೆಪಿ-ಜೈಡಿಎಸ್ ಮೈತ್ರಿ ಮುರಿದು ಬೀಳುತ್ತಾ ಎನ್ನುವ ಪ್ರಶ್ನೆಗೆ ಶೀಘ್ರದಲ್ಲಿ ಉತ್ತರ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!