ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹೆಣ್ಮಕ್ಕಳ ಮೇಲೆ ದೌರ್ಜನ್ಯ, ನೂರಾರು ಹುಡುಗಿಯರು, ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಹಾಸನ ಸಂಸದ, ಜೆಡಿಎಸ್-ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸರ್ಕಾರ ಎಸ್ಐಟಿ ತನಿಖೆಗೆ ಒಪ್ಪಿಸಿದೆ. ಇಂದೇ ಅಧಿಕಾರಿಗಳು ತನಿಖೆ ನಡೆಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡುವುದಾ, ಬಿಡುವುದಾ ಅದು ಎಸ್ಐಟಿಗೆ ಬಿಟ್ಟಿದ್ದು. ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸರ್ಕಾರದ ಹಸ್ತಕ್ಷೇಪವಿಲ್ಲದೆ ತನಿಖೆ ನಡೆಯಲಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಮಾಹಿತಿ ಸಹ ಇದೆ ಎಂದಿದ್ದಾರೆ.
ಪ್ರಜ್ವಲ್ ರೇವಣ್ಣನದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಧ್ಯಮಗಳಲ್ಲಿ, ಸಾರ್ವಜನಿಕರ ಬಾಯಿಯಲ್ಲಿ ಹೆಚ್ಚು ಚರ್ಚೆಯಲ್ಲಿದೆ. ಮಹಿಳಾ ಆಯೋಗ ಸಹ ಈ ಕುರಿತು ತನಿಖೆಗೆ ಮುಂದಾಗಿದೆ. ಇದರ ನಡುವೆ ನಿನ್ನೆ ಮುಂಜಾನೆ 3ಗಂಟೆಗೆ ಪ್ರಜ್ವಲ್ ರೇವಣ್ಣನ ಜರ್ಮನಿಯ ಫ್ರಾಂಕ್ ಫರ್ಟ್ ಗೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಪ್ರಕರಣದ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.