ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ ಮೋದಿ

322

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸೋಮವಾರ ಸಂಜೆ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದ್ದಾರೆ. ಮುಖರ್ಜಿ ಅವರ ಪಾರ್ಥಿವ ಶರೀರಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ನಮನ ಸಲ್ಲಿಸಿದ್ದಾರೆ.

ದೆಹಲಿ ರಾಜಾಜಿ ಮಾರ್ಗ್ ದಲ್ಲಿರುವ ಮುಖರ್ಜಿ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಮುಖರ್ಜಿ ಶರೀರಕ್ಕೆ ಹೂಗುಚ್ಛವಿರಿಸಿ ಅಂತಿಮ ನಮನ ಸಲ್ಲಿಸಿದ್ರು. ಈ ವೇಳೆ ರಕ್ಷಣಾ ರಾಜನಾಥ ಸಿಂಗ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಅನೇಕರು ಅಂತಿಮ ನಮನ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!