ರಾಷ್ಟ್ರಪತಿ ಚುನಾವಣೆ: ಮಧ್ಯಾಹ್ನ ದಿನಾಂಕ ಘೋಷಣೆ

192

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆ ಸಂಬಂಧ ಇಂದು ಮಧ್ಯಾಹ್ನ ಸುಮಾರು 3 ಗಂಟೆಗೆ ದಿನಾಂಕ ಘೋಷಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಚುನಾವಣಾ ಆಯೋಗ ಮಾಧ್ಯಮಗೋಷ್ಠಿ ನಡೆಸಿ ದಿನಾಂಕ ಘೋಷಿಸಲಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ. ಸಂವಿಧಾನದ ಅನುಚ್ಛೇದ 62ರ ಪ್ರಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿಯೇ ಚುನಾವಣೆ ದಿನಾಂಕ ಘೋಷಿಸಬೇಕಿದೆ.




Leave a Reply

Your email address will not be published. Required fields are marked *

error: Content is protected !!