ಮುರ್ಮು ಇಂದು ನಾಮಪತ್ರ ಸಲ್ಲಿಕೆ

198

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಗುರುವಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಬಿಜೆಪಿ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆ ಆದರೆ, ದೇಶದ ಮೊದಲ ಬುಡಕಟ್ಟು ಸಮುದಾಯದ ಮಹಿಳೆ ದೇಶದ ಉನ್ನತ ಸ್ಥಾನಕ್ಕೆ ಏರಿದಂತಾಗುತ್ತೆ. ಜೊತೆಗೆ ರಾಷ್ಟ್ರಪತಿಯಾದ ಎರಡನೇ ಮಹಿಳೆಯಾಗಲಿದ್ದಾರೆ. ಯುಪಿಎ ಸರ್ಕಾರದಲ್ಲಿ ಪ್ರತಿಭಾ ಪಾಟೀಲ್ ಅವರು ರಾಷ್ಟ್ರಪತಿಯಾದ ಮೊದಲ ಮಹಿಳೆಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!