ರಾಷ್ಟ್ರಪತಿ ಚುನಾವಣೆ: ಹಕ್ಕು ಚಲಾಯಿಸಿದ ಪ್ರಧಾನಿ

294

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆ 2022ರ ಮತದಾನ ಇಂದು ನಡೆಯುತ್ತಿದೆ. ಸಂಸತ್ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾನಕ್ಕೆ ವ್ಯವಸ್ಥೆ ಮಾಡಿದ್ದು, ಪ್ರಧಾನಿ ಮೋದಿ ತಮ್ಮ ಹಕ್ಕು ಚಲಾಯಿಸಿದರು.

543 ಸಂಸದರು, 233 ರಾಜ್ಯಸಭಾ ಸದಸ್ಯರು, 4 ಸಾವಿರದ 33 ವಿಧಾನಸಭಾ ಸದಸ್ಯರು(ಶಾಸಕರು) ಸೇರಿದಂತೆ 4 ಸಾವಿರ 809 ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 94 ಮಂದಿ ನಾಮಪತ್ರ ಸಲ್ಲಿಸಿದ್ದರು. 92 ತಿರಸ್ಕೃತಗೊಂಡಿವೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಕಣದಲ್ಲಿದ್ದಾರೆ. ಜುಲೈ 21ಕ್ಕೆ ಫಲಿತಾಂಶ ಪ್ರಕಟವಾಗಲಿದೆ.




Leave a Reply

Your email address will not be published. Required fields are marked *

error: Content is protected !!