ಬೆಳಗಾವಿ ಚಲೋ ನಡೆಸಿದ ಕಾಂಗ್ರೆಸ್

469

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ರಾಜ್ಯ ಸರ್ಕಾರದ ಹಲವು ವಿಚಾರಗಳ ವಿರುದ್ಧ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬರುತ್ತಿದೆ. ಕಾಂಗ್ರೆಸ್ ಶಾಸಕರು ಪಾದಯಾತ್ರೆ ನಡೆಸಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿ ಮಾಡಿದ್ದಾರೆ. ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಬೆಳಗಾವಿ ಚಲೋ ರ್ಯಾಲಿ ನಡೆಸಲಾಯಿತು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರ ನೇತೃತ್ವದಲ್ಲಿ ರ್ಯಾಲಿ ನಡೆಸಲಾಯಿತು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ದೇ, ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬರೆಯನ್ನು ಜನರ ಮೇಲೆ ಹಾಕುತ್ತಿರುವ ಬಗ್ಗೆ ಪ್ರಶ್ನಿಸಿದರು.




Leave a Reply

Your email address will not be published. Required fields are marked *

error: Content is protected !!