ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ತಾಲೂಕಿನ ತೋಟದಕೆರೆ ಹತ್ತಿರ ಈ ಘಟನೆ ನಡೆದಿದೆ.
ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಎನ್.ಆರ್ ಪುರ ಕಡೆ ಹೊರಟಿದ್ದ ಸರ್ಕಾರಿ ಬಸ್ ಹಾಗೂ ಎನ್.ಆರ್ ಪುರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.