ಸೋನಿಯಾ ಬಳಿಕ ಪ್ರಿಯಾಂಕಾಗೆ ಕೋವಿಡ್ 19

187

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದು ನಿನ್ನೆಯಷ್ಟೇ ಗೊತ್ತಾಗಿದೆ. ಇದೀಗ ಅವರ ಪುತ್ರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಣ್ಣಮಟ್ಟದ ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು. ಕೋವಿಡ್ ಪರೀಕ್ಷೆ ಮಾಡಿಸಿದ್ದೆ. ಅದರ ವರದಿ ಬಂದಿದ್ದು ಪಾಸಿಟಿವ್ ಆಗಿದೆ. ಹೀಗಾಗಿ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!