ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಠಿಯಿಂದ ರಾಹುಲ್ ಸ್ಪರ್ಧೆ!

73

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಯ್ ಬರೇಲಿಯಿಂದ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಠಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

ಕೇರಳದ ವಾಯನಾಡುನಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ನಾಳೆ ಮತದಾನ ನಡೆಯಲಿದೆ. 2019ರ ಚುನಾವಣೆಯಲ್ಲಿ ಅಮೇಠಿಯಿಂದಲೂ ಸ್ಪರ್ಧಿಸಿದ್ದು, ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಈ ಬಾರಿಯೂ ರಾಹುಲ್ ವರ್ಸಸ್ ಸ್ಮೃತಿ ಎನ್ನಲಾಗುತ್ತಿದೆ.

ಏಪ್ರಿಲ್ 26ರೊಳಗೆ ಕಾಂಗ್ರೆಸ್ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಹೊಂದಾಣಿಕೆ ಪ್ರಕಾರ ಕಾಂಗ್ರೆಸ್ 17 ಕಡೆ, ಎಸ್ಪಿ 73 ಕಡೆ ಸ್ಪರ್ಧಿಸಲಿದೆ.




Leave a Reply

Your email address will not be published. Required fields are marked *

error: Content is protected !!