ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿದ್ದಾರೆ ಅನ್ನೋ ಆರೋಪದ ಸೂಕ್ತ ತನಿಖೆಯಾಗಲಿ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ತನಿಖೆ ನಡೆಸಲು ಕೋರ್ಟ್ ಲೋಕಾಯುಕ್ತಕ್ಕೆ ಆದೇಶಿಸಿರುವುದು ಒಳ್ಳಯ ವಿಚಾರ. ಸೂಕ್ತ ವಿಚಾರಣೆ ನಡೆದು ಸತ್ಯಾಂಶ ಹೊರ ಬರಬೇಕು. ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಇನ್ನು ಎಸಿಬಿಯಲ್ಲಿದ್ದ ಅಧಿಕಾರಿಗಳನ್ನೇ ಲೋಕಾಯುಕ್ತಕ್ಕೆ ನೇಮಕ ಮಾಡುತ್ತಿರುವುದು ಸರಿಯಲ್ಲ. ಅಧಿಕಾರಿಗಳ ಬಗ್ಗೆ ಮಾಹಿತಿ ಪಡೆದು ನೇಮಕ ಮಾಡಬೇಕು ಎಂದರು.