ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ: 8 ಜನರ ಬಂಧನ

328

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಾಡಿಗೆಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗಳ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿ 8 ಜನ ವಿದೇಶಿಗರನ್ನು ವಶಕ್ಕೆ ಪಡೆಯಲಾಗಿದೆ. ಕೆಂಗೇರಿ ಹಾಗೂ ಸೋಲದೇವನಹಳ್ಳಿಯಲ್ಲಿ ದಾಳಿ ನಡೆಸಲಾಗಿದೆ.

ಎರಡು ಪ್ರತ್ಯೇಕ ದಾಳಿ ನಡೆಸಿ ಇಬ್ಬರು ಮಹಿಳೆಯರು, ಆರು ಪುರುಷರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಪ್ರಾಥಮಿಕ ತನಿಖೆಯಲ್ಲಿ ಭಾರತೀಯರು ಎಂದಿದ್ದಾರೆ. ಪಶ್ಚಿಮ ಬಂಗಾಳ, ತ್ರಿಪುರಾ ಆಧಾರ್ ಕಾರ್ಡ್ ಗಳು, ಬಾಂಗ್ಲಾದೇಶದ ಕೋವಿಡ್ ಲಸಿಕೆ ಸರ್ಟಿಫಿಕೇಟ್ ಸಿಕ್ಕಿದ್ದು, ಅಕ್ರಮ ವಲಸಿಗರು ಇರುವ ಶಂಕೆಯಿದ್ದು ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!