ಲಾಡ್ಜ್ ಕಳ್ಳ ಬಾಗಿಲು ಮೂಲಕ ಕಳ್ಳ ಕೆಲಸ

328

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯಲ್ಲಿನ ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಓರ್ವ ಯುವತಿ ಹಾಗೂ ಮೂವರು ಯುವಕರು ಪತ್ತೆಯಾಗಿದ್ದಾರೆ. ಪೊಲೀಸರು ಲಾಡ್ಜ್ ವೊಂದರ ಮೇಲೆ ದಾಳಿ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಹೊರ ರಾಜ್ಯದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತಿತ್ತು. ಡಿಸಿಐಬಿ ಇನ್ಸ್ ಪೆಕ್ಟರ್ ಕಿರಣ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಶೌಚಾಲಯದ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಲಾಗಿತ್ತು. ಅಲ್ಲಿಂದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!