ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ: ಸಿದ್ದರಾಮಯ್ಯ

187

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಗುರುವಾರ ಮಡಿಕೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಇಂದು ಸಹ ಪ್ರತಿಭಟನೆ ನಡೆಸಲಾಗಿದೆ. ಈ ಬಗ್ಗೆ ಶೃಂಗೇರಿಯಲ್ಲಿ ಮಾತನಾಡಿರುವ ಅವರು, ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಸತ್ಯ ಹೇಳುವುದನ್ನು ಕೆಲವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಾವರ್ಕರ್ ಕ್ಷಮಾಪಣಾ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರ ಬಂದವರು. ಗಾಂಧಿಯನ್ನು ಕೊಂದವರನ್ನು ಬಿಜೆಪಿಯವರು ಪೂಜೆ ಮಾಡುತ್ತಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಈ ಘಟನೆಯನ್ನು ಖಂಡಿಸಿ ಕಾಂಗ್ರೆಸ್, ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆಗಸ್ಟ್ 28ರಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಸಜ್ಜಾಗಿದೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!