ಕೇಂದ್ರದ ವಿರುದ್ಧ ಫೆ.7ರಂದು ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

143

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಕ್ಕೆ ಬರ ಪರಿಹಾರ ವಿತರಣೆ, ತೆರಿಗೆ ಹಂಚಿಕೆ ವಿಚಾರದಲ್ಲಿ ತೋರಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಅತಿ ಹೆಚ್ಚು ತೆರಿಗೆ ಹಣ ಕೇಂದ್ರಕ್ಕೆ ಹೋಗುತ್ತದೆ. ಆದರೆ, ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ನಮ್ಮದು ಉತ್ತರ ಭಾರತದ ರಾಜ್ಯಗಳ ವಿರುದ್ಧ ಪ್ರತಿಭಟನೆಯಲ್ಲ. ಇದರಲ್ಲಿ ಯಾವುದೇ ರಾಜಕೀಯ ಅಲ್ಲವೆಂದರು.

ದೆಹಲಿಯ ಜಂತರ್ ಮಂತರ್ ಮುಂದೆ ಪ್ರತಿಭಟನೆ ನಡೆಸಲಾಗುವುದು. ಇದರಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಭಾಗವಹಿಸಲಿದ್ದಾರೆ ಎಂದರು.




Leave a Reply

Your email address will not be published. Required fields are marked *

error: Content is protected !!