ಪುಟ್ಟರಂಗಶೆಟ್ಟಿಗೆ ತಪ್ಪಿದ ಸಚಿವ ಸ್ಥಾನ, ಪ್ರತಿಭಟನೆ

111

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಶನಿವಾರ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ, 4 ಬಾರಿ ಶಾಸಕರಾಗಿ ಆಯ್ಕೆ ಆದರೂ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದೆ ಇರುವುದಕ್ಕೆ ಉಪ್ಪಾರ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉಪ್ಪಾರ ಸಮಾಜದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಕೊನೆಯ ಕ್ಷಣದಲ್ಲಿ ಕೈ ಬಿಡಲಾಗಿದೆ ಎಂದು ಮುಖಂಡರು ವಾಗ್ದಾಳಿ ನಡೆಸಿದರು.

ಕೊಟ್ಟ ಮಾತು ಉಳಿಸಿಕೊಳ್ಳಬೇಕು. ರಾಜ್ಯದಲ್ಲಿ 40 ಲಕ್ಷ ಉಪ್ಪಾರ ಸಮಾಜದವರು ಇದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದೆ ಹೋದರೆ ಸೋಮವಾರ ಚಾಮರಾಜನಗರ ಜಿಲ್ಲೆ ಬಂದ್ ಗೆ ಕರೆ ನೀಡಲಾಗುವುದು ಅನ್ನೋ ಎಚ್ಚರಿಕೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!