ಚರಂಡಿ ನೀರು ಮೈಮೇಲೆ ಸುರಿದುಕೊಂಡು ಪ್ರತಿಭಟನೆ

216

ಪ್ರಜಾಸ್ತ್ರ ಸುದ್ದಿ

ರಾಯಚೂರು: ಚರಂಡಿ ನೀರನ್ನು ಮೈ ಮೇಲೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳು ಪ್ರತಿಭಟನೆ ನಡೆಸಿರುವ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ. ಗುರುತಿನ ಚೀಟಿಗಾಗಿ ಈ ರೀತಿಯ ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನೆ ನಡೆಸಿದರು. ಗುರುತಿನ ಚೀಟಿ ಇಲ್ಲದೆ ಇರುವುದರಿಂದ ತಮಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ನಮಗೆ ಗುರುತಿನ ಚೀಟ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಚರಂಡಿ ನೀರು ಮೈ ಮೇಲೆ ಸುರಿದುಕೊಂಡು ತಮ್ಮ ನೋವು ವ್ಯಕ್ತಪಡಿಸಿದರು.




Leave a Reply

Your email address will not be published. Required fields are marked *

error: Content is protected !!