ದಿವ್ಯಾ ಹಾಗರಗಿ ಬಂಧನ ತಪ್ಪಿಸುತ್ತಿದ್ದಾರಾ?

655

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ದೊಡ್ಡ ಸಂಚಲನ ಉಂಟು ಮಾಡಿರುವ ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಈಗಾಗ್ಲೇ 13ಕ್ಕೂ ಹೆಚ್ಚು ಜನರ ಬಂಧನವಾಗಿದೆ. ಆದರೆ, ಇದರ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ ಇದುವರೆಗೂ ಆಗದೆ ಇರುವುದು ಜನರಲ್ಲಿ ಅನುಮಾನ ಮೂಡಿಸಿದೆ.

ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ದಿವ್ಯಾ ಹಾಗರಗಿ, ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದಾರೆ. ಗೃಹ ಸಚಿವರು, ಐಪಿಎಸ್ ಅಧಿಕಾರಿ ರವಿ ಚನ್ನಣ್ಣವರ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದೆಲ್ಲವನ್ನು ನೋಡಿದರೆ ದಿವ್ಯಾ ಹಾಗರಗಿ ಬಂಧನವನ್ನು ತಪ್ಪಿಸುವ ಕೆಲಸ ನಡೆದಿದೆ ಎಂದು ಹೇಳಲಾಗುತ್ತಿದೆ.

ಸಿಐಡಿ ಪೊಲೀಸರು 6 ತಂಡ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ, ಜನರಿಗೆ ಇದರ ಬಗ್ಗೆ ನಂಬಿಕೆ ಬರುತ್ತಿಲ್ಲ. ಎಲ್ಲೋ ಒಂದು ಕಡೆ ವ್ಯವಸ್ಥಿತವಾಗಿ ಆಕೆಯನ್ನು ಇದರಿಂದ ತಪ್ಪಿಸುವ ಕೆಲಸವಾಗುತ್ತಿದೆ ಅನ್ನೋ ಅನುಮಾನ ಮೂಡಿದ್ದು, ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪೊಲೀಸರು ಉತ್ತರಿಸಬೇಕಿದೆ.




Leave a Reply

Your email address will not be published. Required fields are marked *

error: Content is protected !!