ಶೀಘ್ರದಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ

388

ಬೆಂಗಳೂರು: ಲಾಕ್ ಡೌನ್ ನಿಂದಾಗಿ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ(ಇಂಗ್ಲಿಷ್) ಮುಂದೂಡಲಾಗಿದೆ. ಹೀಗಾಗಿ ಶೀಘ್ರದಲ್ಲಿಯೇ ಪರೀಕ್ಷೆ ನಡೆಸಲಾಗುವುದು ಎಂದು ಡಿಸಿಎಂ ಡಾ.ಸಿ.ಅಶ್ವಥನಾರಾಯಣ ಅವರು ತಿಳಿಸಿದ್ದಾರೆ.

ಇಂಗ್ಲಿಷ್ ಪರೀಕ್ಷೆಯ ದಿನಾಂಕ ಘೋಷಿಸಲಾಗುವುದು, ಅಲ್ದೇ ಸೆಪ್ಟೆಂಬರ್ ಮೊದಲ ವಾರದಲ್ಲಿ ಪದವಿ ತರಗತಿಗಳು ಶುರು ಮಾಡಲಾಗುವುದು ಎಂದು ಹೇಳಿದ್ದಾರೆ. ಕರೋನಾ ನಿಯಂತ್ರಣ ಸಲುವಾಗಿ ಶೈಕ್ಷಣಿಕ ಚಟುವಟಿಕೆ ನಿರ್ಬಂಧಿಸಲಾಗಿತ್ತು. ಇದೀಗ ಲಾಕ್ ಡೌನ್ ಮುಕ್ತಾಯಗೊಂಡ ನಂತರ, ಮತ್ತೆ ಶೈಕ್ಷಣಿಕೆ ಪ್ರಕ್ರಿಯೆಗಳು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವಥನಾರಾಯಣ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!