ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ

467

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಟೈಂ ಟೇಬಲ್ ರಿಲೀಸ್ ಮಾಡಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫೆಬ್ರುವರಿ 10ರಿಂದ 20ರ ತನಕ ನಡೆಯಲಿವೆ. ಹೀಗಾಗಿ ಜನವರಿ 2 ರಿಂದ 10ರೊಳಗೆ ಸೈನ್ಸ್ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆ ಮುಗಿಸಲು ಸೂಚಿಸಲಾಗಿದೆ. ಇನ್ನು ದ್ವಿತೀಯ ಪಿಯುಸಿ ಪೂರ್ವಸಿದ್ಧತೆ ಪರೀಕ್ಷೆ ಜನವರಿ 10ರಿಂದ 21ರವರೆಗೂ ನಡೆಯಲಿದೆ. ಈ ಎಲ್ಲ ಪರೀಕ್ಷೆಗಳನ್ನು ಆಯಾ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ನಿಗದಿತ ಡೇಟ್ ನಲ್ಲಿ ನಡೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.




Leave a Reply

Your email address will not be published. Required fields are marked *

error: Content is protected !!