ವಿಜಯಪುರ: ಇಂದಿನಿಂದ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಗಳು ಶುರುವಾಗಿವೆ. ಇಂದು ಭೌತಶಾಸ್ತ್ರ ಹಾಗೂ ಇತಿಹಾಸ ಪರೀಕ್ಷೆಗಳು ನಡೆದಿವೆ. ಮೊದಲ ದಿನವೇ ಭೌತಶಾಸ್ತ್ರದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ತೀವ್ರ ಕಟ್ಟೆಚ್ಚರದ ನಡುವೆಯೂ ವಿಜಯಪುರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ನಗರದ ಶಾಂತೇಶ್ವರ ಪಿಯು ಕಾಲೇಜಿನಲ್ಲಿ ಇಂದು ನಡೆಯುತ್ತಿರುವ ಭೌತಶಾಸ್ತ್ರದ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಅಂತಾ ಹೇಳಲಾಗ್ತಿದೆ. ಯಾರೋ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಯ ಫೋಟೋ ಕ್ಲಿಕ್ ಮಾಡಿ ಕಳಿಸಲಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆಯಂತೆ. ಕಾಲೇಜು ಸಿಬ್ಬಂದಿ ಮೇಲೆ ಅನುಮಾನ ಮೂಡಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ನಿಜವೋ ಸುಳ್ಳೋ ಅನ್ನೋದರ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಬೇಕಾಗಿದೆ.