ಪಿಯುಸಿ, ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ

436

ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದಾಗಿ ಮುಂದೂದಲಾಗದ್ದ ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಘೋಷಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ ಅವರು ದಿನಾಂಕ ಘೋಷಣೆ ಮಾಡಿದ್ದಾರೆ.

ಜೂನ್ 18ಕ್ಕೆ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಜೂನ್ 25ರಿಂದ ಜುಲೈ 4ರ ತನಕ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಪರೀಕ್ಷೆಗಾಗಿ ಬದಲಾದ ಪರಿಸ್ಥಿತಿಯಲ್ಲಿ 2,879 ಕೊಠಡಿ ಬದಲಾಗಿ 43,720 ಕೊಠಡಿ ಬಳಕೆ ಮಾಡಲಾಗ್ತಿದೆ. ಆರೋಗ್ಯ ಇಲಾಖೆ ಸಲಹೆ ಪಡೆದು ಪರೀಕ್ಷೆ ಸಭಾಂಗಣಗಳಲ್ಲಿ ಸಾಮಾಜಿಕ ಅಂತರ, ಸ್ಯಾನಟೈಸರ್, ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಥರ್ಮಲ್ ಸ್ಕ್ಯಾನರ್ ಮೂಲಕ ವಿದ್ಯಾರ್ಥಿಗಳ ಪರೀಕ್ಷೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

ಇನ್ನು ವಿದ್ಯಾರ್ಥಿಗಳು ಪ್ರಸ್ತುತ ವಾಸಿಸ್ತಿರುವ ಸ್ಥಳದಿಂದ ಹತ್ತಿರದಲ್ಲಿರುವ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಈ ತಿಂಗಳು 25ರೊಳಗೆ ಶಾಲಾ ಮುಖ್ಯಸ್ಥರನ್ನ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಈಗಾಗ್ಲೇ ದೂರದರ್ಶನದಲ್ಲಿ ಪುನರ್ ಮಿಲನ ಕಾರ್ಯಕ್ರಮ ಮುಂದುವರೆಸಲಾಗುವುದು. ಕೊನೆಯ ಮೂರು ದಿನಗಳ ಕಾಲ ಮಾದರಿ ಪ್ರಶ್ನೆ ಪತ್ರಿಕೆ ರೂಪಿಸಿ ವಿದ್ಯಾರ್ಥಿಗಳಿಗೆ ಸಜ್ಜು ಮಾಡಲಾಗುತ್ತೆ ಎಂದು ಸಚಿವರು ತಿಳಿಸಿದ್ದಾರೆ.

ಇದರ ಜೊತೆಗೆ ಕೇಂದ್ರ ಸರ್ಕಾರ ಮೇ 31ರ ತನಕ ಲಾಕ್ ಡೌನ್ ಮುಂದುವರೆಸಿರುವುದ್ರಿಂದ ಶಾಲಾ, ಕಾಲೇಜುಗಳನ್ನ ಓಪನ್ ಮಾಡುವಂತಿಲ್ಲ. ಈ ವರ್ಷ ಯಾವುದೇ ಶುಲ್ಕ ಹೆಚ್ಚಿಸುವಂತಿಲ್ಲ. ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಮಕ್ಕಳ ಶಾಲೆ ಯಾವಾಗ ಪ್ರಾರಂಭಿಸಬೇಕು ಅನ್ನೋದರ ಚರ್ಚೆ ನಡೆದಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!