ಪಿಯು ವಿದ್ಯಾರ್ಥಿನಿ ನಿಗೂಢ ಸಾವು

294

ಪ್ರಜಾಸ್ತ್ರ ಸುದ್ದಿ

ಲಿಂಗಸಗೂರು: ರಾಯಚೂರು ಜಿಲ್ಲೆಯ ಲಿಂಗಸಗೂರಿನ ಖಾಸಗಿ ಕಾಲೇಜಿನ ವಸತಿ ನಿಲಯದಲ್ಲಿ 17 ವರ್ಷದ ಯುವತಿ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ.

ಕಾಲೇಜಿನ ಪ್ರಿನ್ಸಿಪಲ್ ಅತ್ಯಾಚಾರವೆಸಗಿ, ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು, ಸಂಬಂಧಿಕರು ಆರೋಪಿಸಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಗೆ ಪ್ರಿನ್ಸಿಪಾಲ್ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ್ದಾನೆ ಅನ್ನೋ ಗಂಭೀರ ಆರೋಪ ಕೇಳಿ ಬಂದಿದೆ.

ಯುವತಿಯ ನಿಗೂಢ ಸಾವಿನ ಸತ್ಯ ಹೊರ ಬರಬೇಕಿದೆ. ನಿಜಕ್ಕೂ ನಡೆದಿದ್ದು, ವಿದ್ಯಾರ್ಥಿನಿ ಸಾವು ಹೇಗಾಯಿತು ಅನ್ನೋದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!