ಸಿಂದಗಿಯಲ್ಲಿ ಪಿಯು ಕಾಲೇಜು ಶಿಕ್ಷಕರ ಪ್ರತಿಭಟನೆ

239

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪದವಿ ಪೂರ್ವ ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ನಿರ್ಧಾರಗಳನ್ನು ಖಂಡಿಸಿ ಪಟ್ಟಣದಲ್ಲಿ ಪಿಯು ಕಾಲೇಜುಗಳ ಶಿಕ್ಷಕರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಶಿಕ್ಷಕರು, ಸರ್ಕಾರದ ನಡೆಯನ್ನು ಖಂಡಿಸಿ ಘೋಷಣೆ ಕೂಗಿದರು.

ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿ, ಈಗಾಗ್ಲೇ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಹಾಗೂ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ನಡುವೆ 3 ಬಾರಿ ಪರೀಕ್ಷೆ ನಡೆಸುವ ನಿರ್ಧಾರ ಅವೈಜ್ಞಾನಿಕ ಕೂಡಲೇ ಇದನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಎಂದು ಬದಲಾಯಿಸಲಾಗಿದೆ. ಇದನ್ನು ಕೂಡಲೇ ಕೈ ಬಿಟ್ಟು ಪದವಿ ಪೂರ್ವ ಶಿಕ್ಷಣ ಇಲಾಖೆ ಅನ್ನೋ ಹೆಸರನ್ನೇ ಕಾಯ್ದುಕೊಂಡು ಹೋಗಬೇಕು. ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸುವ ಪರೀಕ್ಷಾ ವಿಭಾಗವನ್ನು ಹಿಂದಕ್ಕೆ ಪಡೆಯಬೇಕು. ಪ್ರತಿ ಜಿಲ್ಲಾ ಹಂತಗಳಲ್ಲಿ ಪದವಿ ಪೂರ್ಣ ಶಿಕ್ಷಣ ಇಲಾಖೆಯ ಮೇಲುಸ್ತುವಾರಿ ನಡೆಸುವ ಸಂಬಂಧ ಜಿಲ್ಲಾ ಪಂಚಾಯ್ತಿ ಸಿಇಒ, ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆಯವರಿಗೆ ವಹಿಸಲು ಹೊರಡಿಸಿರುವ ಸುತ್ತೋಲೆ ಹಿಂಪಡೆಯಬೇಕು ಎನ್ನುವುದು ಸೇರಿ ಹಲವು ವಿಚಾರಗಳ ಕುರಿತು ಮುಖ್ಯಮಂತ್ರಿಗೆ ಮನವಿಯನ್ನು ತಹಶೀಲ್ದಾರ್ ಪ್ರದೀಪಕುಮಾರ ಹಿರಮೇಠ ಮೂಲಕ ಸಲ್ಲಿಸಲಾಯಿತು.

ಈ ವೇಳೆ ಎ.ಆರ್ ಹೆಗ್ಗನದೊಡ್ಡಿ, ಎಸ್.ಬಿ ಜಾಧವ, ಟಿ.ಎನ್ ಲಮಾಣಿ, ಜಿ.ವಿ ನಾಯಕ, ಎ.ಬಿ ಕೊಚಲ, ಎಸ್.ಆರ್ ಬೂದಿಹಾಳ, ಆರ್.ಎಂ ನಾರಾಯಣ್ಕರ, ಪಿ.ಬಿ ಜೋಗುರ, ಎನ್.ಬಿ ಪೂಜಾರಿ, ಎಸ್.ಜಿ ಪಾಟೀಲ, ಬಿ.ಎಂ ಸಿಂಗನಹಳ್ಳಿ, ಬಿ.ಬಿ ಜಮಾದಾರ, ಮಹಾಂತೇಶ ಕಲಶೆಟ್ಟಿ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಚಾರ್ಯರು, ಶಿಕ್ಷಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!