ಪಲ್ಸ್ ಪೋಲಿಯೊ ಅಭಿಯಾನಕ್ಕೆ ತಹಶೀಲ್ದಾರ್ ಚಾಲನೆ

96

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಚಾಲನೆ ನೀಡಿದರು. ಮಗುವಿಗೆ 2 ಹನಿ ಪೋಲಿಯೊ ಹಾಕುವುದರ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು.

ಈ ದೇಶವನ್ನು ಪೋಲಿಯೊ ಮುಕ್ತ ಮಾಡಬೇಕಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾಕಷ್ಟು ಶ್ರಮ ವಹಿಸಿ ಪ್ರತಿ ವರ್ಷ ಪೋಲಿಯೊ ಹಾಕುವ ಕೆಲಸ ಮಾಡುತ್ತಿದೆ. ನಮ್ಮ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.

ಈ ವೇಳೆ ತಾಲೂಕು ಪಂಚಾಯತಿ ನಿರ್ದೇಶಕರ ನಿತ್ಯಾನಂದ ಯಲಗೋಡ, ಸಿಡಿಪಿಒ ಶಂಬುಲಿಂಗ ಹಿರೇಮಠ, ತಾಲೂಕಾ ಆರೋಗ್ಯ ಅಧಿಕಾರಿ ಡ.ಎ.ಎ ಮಾಗಿ, ಡಾ.ಮಹಾಂತೇಶ ಹಿರೇಮಠ, ಡಾ.ಎಂ.ಆರ್ ಬಡಿಗೇರ, ಡಾ.ದೇಶಮುಖ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಕುಲಕರ್ಣಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವಾಯ್ ಚೌಡಕಿ, ರಾಯಣ್ಣ ಸೊನ್ನದ ಹಾಗೂ ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!