ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು

143

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್, ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ನಿಧನದ ಬಳಿಕ ಅವರ ಹೆಸರಿನಲ್ಲಿ ಅನೇಕ ವೃತ್ತ, ಪಾರ್ಕ್ ಗಳಿಗೆ ಹೆಸರು ಇಡಲಾಯಿತು. ಇದೀಗ ಸಿಲಿಕಾನ್ ಸಿಟಿಯಲ್ಲಿರುವ ರಿಂಗ್ ರೋಡ್ ಗೆ ಅಪ್ಪು ಹೆಸರು ನಾಮಕಾರಣ ಮಾಡಲಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.

ಮೈಸೂರು ರಸ್ತೆಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರು ಇಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಫೆಬ್ರವರಿ 7ರಂದು ಸಂಜೆ 6ಗಂಟೆ ಮುಖ್ಯಮಂತ್ರಿ ಪದ್ಮನಾಭ ನಗರದಲ್ಲಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ವೇಳೆ ಅಶ್ವಿನಿ ಪುನೀತ್ ರಾಜಕುಮಾರ್, ಶಿವಣ್ಣ, ರಾಘಣ್ಣ, ಸಚಿವರು ಸೇರಿ ಅನೇಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!