ಕತಾರ್ ನಿಂದ ಭಾರತೀಯ 8 ನಿವೃತ್ತ ಅಧಿಕಾರಿಗಳ ಬಿಡುಗಡೆ

130

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಭಾರತೀಯ ನೌಕಾಪಡೆಯ 8 ನಿವೃತ್ತ ಅಧಿಕಾರಿಗಳನ್ನು ಕತಾರ್ ಬಿಡುಗಡೆ ಮಾಡಿದೆ. 2022ರಲ್ಲಿ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಅಲ್ಲದೆ ಅವರಿಗೆ ಮರಣ ದಂಡನೆ ವಿಧಿಸಲಾಗಿತ್ತು.

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳಿಗೆ ವಿಧಿಸಿದ್ದ ಮರಣ ದಂಡನೆಯನ್ನು ಕಳೆದ ಡಿಸೆಂಬರ್ 28ರಂದು ಅಲ್ಲಿನ ನ್ಯಾಯಾಲಾಯ ರದ್ದುಗೊಳಿಸಿತ್ತು. ಇದೀಗ ಇವರೆಲ್ಲ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.

ಇಸ್ರೇಲ್ ಪರವಾಗಿ ಬಹುಗಾರಿಕೆ ಮಾಡಲಾಗುತ್ತಿದೆ ಎನ್ನುವ ಆರೋಪದ ಮೇಲೆ ಬಂಧಿಸಲಾಗಿತ್ತು. ಕತಾರ್ ಕೋರ್ಟ್ ಮರಣದಂಡನೆ ವಿಧಿಸಿತ್ತು. ಪ್ರಕರಣ ಸುಖಾಂತ್ಯ ಕಂಡಿದ್ದು, 8ರಲ್ಲಿ 7 ಅಧಿಕಾರಿಗಳು ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!