ಪ್ರಜಾಸ್ತ್ರ ಸುದ್ದಿ
ತುಮಕೂರು: ಕಾಂಗ್ರೆಸ್ ಯುವ ನಾಯಕ, ಸಂಸದ ರಾಹುಲ್ ಗಾಂಧಿ, ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಜ್ಞಾನಮಂದಿರಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಸ್ಕರಿಸಿದರು. ನಂತರ ಸಾಮೂಹಿಕವಾಗಿ ನಡೆಯುವ ಪ್ರಾರ್ಥನೆಯಲ್ಲಿ ಭಾಗಿಯಾದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇನ್ನು ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಗಾಂಧಿ ಕುಟುಂಬ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಾ ಬಂದಿದೆ.