ಇಂದು ಸಹ ರಾಜ್ಯದಲ್ಲಿ ಮಳೆ ಆರ್ಭಟ

39

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ಅನೇಕ ಜಿಲ್ಲೆಗಳಲ್ಲಿ ಆಲೆಕಲ್ಲು ಮಳೆಯಾಗಿದೆ. ಮರ, ವಿದ್ಯುತ್ ಕಂಬಗಳು ಬಿದ್ದು ಕೆಲವು ಕಡೆ ಜೀವ ಹಾನಿಯಾಗಿವೆ. ಸಿಡಿಲಿನಿಂದಲೂ ಅಪಾಯ ಸಂಭವಿಸಿದೆ.

ಬೆಂಗಳೂರು ಸೇರಿದಂತೆ ಕಲಬುರಗಿ, ಬೀದರ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಯಾದ್ಯಂತ ವ್ಯಾಪಾಕ ಮಳೆಯಾಗಿದೆ. ಇದರಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಗುಮ್ಮಟನಗರಿಯ ಬಹತೇಕ ತಾಲೂಕುಗಳಲ್ಲಿ ರೈತರು ಬೆಳೆದ ದ್ರಾಕ್ಷಿ ಬೆಳೆ ಹಾನಿಯಾಗಿದೆ. ಇದರಿಂದಾಗಿ ಕಂಗಾಲಾಗಿದ್ದಾರೆ.

ಇನ್ನು ಬೃಹತ ಚರಂಡಗಳು ತುಂಬಿಕೊಂಡು ಮನೆಗಳಿಗೆ ನೀರು ನುಗ್ಗಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಇದರ ನಡುವೆ ಭಾನುವಾರವೂ ಮಳೆ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು.
Leave a Reply

Your email address will not be published. Required fields are marked *

error: Content is protected !!