ಸೆ.24ರ ತನಕ ರಾಜ್ಯದಲ್ಲಿ ಮಳೆ

196

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಭರ್ಜರಿಯಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಬಹುತೇಕ ಕಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಮಳೆ ಸೆಪ್ಟೆಂಬರ್ 24ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಭಾರೀ ಮಳೆಯಾಗುತ್ತಿದೆ.

ಬೆಂಗಳೂರು, ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ಶಿವಮೊಗ್ಗ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ರಾಯಚೂರು, ಬೆಳಗಾವಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕರು ಮುಂಜಾಗ್ರಹಿತೆ ವಹಿಸಿಕೊಳ್ಳಬೇಕಿದೆ.




Leave a Reply

Your email address will not be published. Required fields are marked *

error: Content is protected !!