ತಿವಾರೆ ಜಲಾಶಯ ಉಕ್ಕಿ 2 ಸಾವು, 7 ಹಳ್ಳಿಗಳಲ್ಲಿ ಪ್ರವಾಹ

347

ಮಹಾರಾಷ್ಟ್ರ: ಸತತ ಭರ್ಜರಿ ಮಳೆಯಿಂದಾಗಿ ತಿವಾರೆ ಜಲಾಶಯ ಉಕ್ಕಿ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಇದ್ರಿಂದಾಗಿ ಮಹಾರಾಷ್ಟ್ರದಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯವಸ್ಥವಾಗಿದೆ.

ಇನ್ನು 22 ರಿಂದ 24 ಮಂದಿ ನಾಪತ್ತೆಯಾಗಿದ್ದು ಅವರೆಲ್ಲರ ಶೋಧ ಕಾರ್ಯಾಚರಣೆ ನಡೆದಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ತಿವಾರೆ ಜಲಾಶಯ ಉಕ್ಕಿ ಹರಿದ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹೀಗಾಗಿ 7 ಹಳ್ಳಿಗಳಿಗೆ ಪ್ರವಾಹ ಸ್ಥಿತಿ ಎದುರಾಗಿದೆ. ಇದರಲ್ಲಿ ಈಗಾಗ್ಲೇ 12ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಮುಳುಗಿವೆ.

ಕಳೆದ ಎರಡ್ಮೂರು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಗೋಡೆ ಕುಸಿದ ಎರಡು ಪ್ರಕರಣಗಳಲ್ಲಿ ಈಗಾಗ್ಲೇ 35 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಮಂಗಳವಾರ ಶಾಲಾ, ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರೆದಿದ್ದು ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಅನ್ನೋದು ಗೊತ್ತಿಲ್ಲ. ಹವಾಮಾನ ಇಲಾಖೆ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ.


TAG


Leave a Reply

Your email address will not be published. Required fields are marked *

error: Content is protected !!