ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ 10 ಜನರ ಸಾವು

87

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ. 8 ಸಾವಿರ ಎಕರೆಗೂ ಹೆಚ್ಚಿನ ಜಮೀನು ಹಾಳಾಗಿದೆ.

ಮುಂಗಾರು ಪೂರ್ವ ಮಳೆ ಅನೇಕ ಜಿಲ್ಲೆಗಳಲ್ಲಿ ಅಬ್ಬರಿಸಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು, ಮಳೆಯಿಂದ ಧರೆಗುರುಳಿದ ವಿದ್ಯುತ್ ಕಂಬದ ತಂತಿ ತುಳಿದು, ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿ ಹೀಗೆ ವಿವಿಧ ಪರಿಣಾಮ 10 ಜನರು ಮೃತಪಟ್ಟಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!