ರಾಜ್ಯದಲ್ಲಿ ಮತ್ತೆ ಮಳೆ.. ಆಂಧ್ರ, ಒಡಿಶಾಗೆ ಚಂಡಮಾರುತ ಭಯ..

205

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಅಕಾಲಿಕ ಮಳೆ ಕಾಣಿಸಿಕೊಳ್ಳಲಿದೆಯಂತೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ವಾಯುಭಾರ ಕುಸಿತದ ಪರಿಣಾಮ ಮತ್ತೆ ಮಳೆ ಶುರುವಾಗಲಿದೆ.

ಬೆಂಗಳೂರು, ಮಂಡ್ಯ, ಚಾಮರಾಜನಗರ, ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಹಾಸನ ಸೇರಿ ವಿವಿಧ ಕಡೆ ಮಳೆಯಾಗಲಿದೆಯಂತೆ. ಇನ್ನು ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!