ರಾಜಸ್ಥಾನ ಚುನಾವಣೆ: 199 ಕ್ಷೇತ್ರಗಳಲ್ಲಿ ಮಾತ್ರ ಮತದಾನ

267

ಪ್ರಜಾಸ್ತ್ರ ಸುದ್ದಿ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆ ಇಂದು ಮತದಾನ ನಡೆಯುತ್ತಿದೆ. ಮೊದಲ ಬಾರಿಗೆ ಮತ ಚಲಾಯುಸುತ್ತಿರುವ ಯುವ ಜನತೆಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.

ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾವಣೆ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿ ಎಂದು ಮನವಿ ಮಾಡುತ್ತೇನೆ ಅಂತಾ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಹೇಳಿದ್ದಾರೆ.

200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ನೇರ ಹಣಾಹಣಿ ಇದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ 99, ಬಿಜೆಪಿ 73 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇಂದು 199 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಕರಣಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ನಿಧನದ ಹಿನ್ನಲೆಯಲ್ಲಿ ಮತದಾನ ಮುಂದೂಡಲಾಗಿದೆ.




Leave a Reply

Your email address will not be published. Required fields are marked *

error: Content is protected !!