‘ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು’

140

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದೆ. ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಕೇಂದ್ರ ಗೃಹ ಇಲಾಖೆ ಕ್ರಮ ಕೈಗೊಂಡಿದೆ. ಇಂತಹ ಸಂಧರ್ಭದಲ್ಲಿ ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಪೊಲೀಸ್ ಇಲಾಖೆಗೆ  ಸೂಚಿಸಿದ್ದೇನೆ. ಈಗಾಗಲೇ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವೇಳೆ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ರಾಜ್ಯದಲ್ಲಿ ಅಹಿತಕರ ಘಟನೆ ನಡೆದರೆ ಕಾಂಗ್ರೆಸ್ ಸರ್ಕಾರ ಕಾರಣವೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಇದರ ಹಿಂದೆ, ಶಾಂತಿ ಕಾಪಾಡಿಕೊಂಡು ಹೋಗಬೇಕು ಎನ್ನುವ ಸದುದ್ದೇಶಕ್ಕಿಂತ ಪ್ರಚೋದನಕಾರಿ ಧ್ವನಿಯಿದೆ. ಆದರೆ, ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತೆ ಎಂದು ಎಚ್ಚರಿಕೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!