ಐತಿಹಾಸಿಕ ರಾಮ ಮಂದಿರ ಭೂಮಿಪೂಜೆಗೆ ಕ್ಷಣಗಣನೆ

281

ಪ್ರಜಾಸ್ತ್ರ ಸುದ್ದಿ

ಅಯೋಧ್ಯೆ: ಇಂದು ದೇಶದ ಇತಿಹಾಸದಲ್ಲಿ ಐತಿಹಾಸಿಕ ಕ್ಷಣವಾಗಿ ದಾಖಲಾಗಲಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರುವ ಭವ್ಯ ಮಂದಿರಕ್ಕೆ ಪ್ರಧಾನಿ ಮೋದಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಬೆಳಗ್ಗೆ 11.30ಕ್ಕೆ ಪ್ರಧಾನಿ ಮೋದಿ ದೆಹಲಿಯಿಂದ ಅಯೋಧ್ಯೆಗೆ ಆಗಮಿಸಲಿದ್ದಾರೆ. ಮೊದಲು ಹನುಮಾನ ದರ್ಶನ ಮಾಡಲಿದ್ದಾರೆ. ನಂತರ ರಾಮಲಲ್ಲಾ ದೇಗುಲಕ್ಕೆ ಭೇಟಿ ನೀಡಿ, ಮಧ್ಯಾಹ್ನ 12.44ರ ಮಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಲಿದ್ದಾರೆ. 12.44.08ರಿಂದ 12.44.40 ಗಂಟೆಯೊಳಗೆ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ಸಾಂಕೇತಿಕ ಭೂಮಿ ಪೂಜೆ ಮಾಡಲಿದ್ದಾರೆ.

ಆರ್ ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ, ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ, ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ 175 ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಇನ್ನು ಅಯೋಧ್ಯೆಯಲ್ಲಿ ಭೂಮಿಪೂಜೆ ನಡೆಯುತ್ತಿರುವುದ್ರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ. ಎಲ್ಲೆಡೆ ಪೊಲೀಸ್ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ಕರೋನಾ ಹಾವಳಿ ಇರುವುದ್ರಿಂದ ಪ್ರಧಾನಿ ಸುತ್ತಮುತ್ತ ಯಾರಿಗೂ ಸುಳಿಯದಂತೆ ವ್ಯವಸ್ಥೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!