ರಾಮೇಶ್ವರಂ ಪ್ರಕರಣ: ಶಂಕಿತರು 10 ದಿನ ಎನ್ಐಎ ವಶಕ್ಕೆ

58

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಶಂಕಿತರಾದ ಮುಸಾವಿರ್ ಹುಸೇನ್ ಹಾಗೂ ಅಬ್ದುಲ್ ಮತೀನ್ ತಾಹಾ ಇಬ್ಬರನ್ನು 10 ದಿನಗಳ ಎನ್ಐಎ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಕೊಲ್ಕತ್ತಾ ಬಳಿ ಈ ಇಬ್ಬರನ್ನು ಶುಕ್ರವಾರ ಬಂಧಿಸಲಾಗಿದ್ದು, ಶನಿವಾರ ಬೆಂಗಳೂರಿಗೆ ಕರೆದುಕೊಂಡು ಬರಲಾಯಿತು. ಮುಂಜಾನೆ 11.30ರ ಸುಮಾರಿಗೆ ಎನ್ಐಎ ವಿಶೇಷ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶ ಸಿ.ಬಿ ಸಂತೋಷ್ ಅವರ ಗೃಹ ಕಚೇರಿಯಲ್ಲಿ ಹಾಜರು ಪಡಿಸಲಾಯಿತು.

ಸುಮಾರು 1 ಗಂಟೆಗಳ ಕಾಲ ವಾದ ಆಲಿಸಿದ ನ್ಯಾಯಾಧೀಶರು 10 ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿ ಆದೇಶಿಸಿದರು. ಈ ವೇಳೆ ಶಂಕಿತರ ಪರವಾದ ವಕೀಲರಾಗಲಿ, ಕುಟುಂಬಸ್ಥರಾಗಲಿ ಹಾಜರಿರಲಿಲ್ಲವೆಂದು ತಿಳಿದು ಬಂದಿದೆ.

ಇನ್ನು ಈ ಪ್ರಕರಣದಲ್ಲಿ ರಾಜ್ಯ ಪೊಲೀಸರ ಕಾರ್ಯಕ್ಷಮತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!