ಅತ್ಯಾಚಾರ ಆರೋಪ: ಸಿಪಿಐ ಅಮಾನತು

203

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಅತ್ಯಾಚಾರ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಚಳ್ಳಕೆರೆ ಸಿಪಿಐ ಉಮೇಶ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಕಳೆದ ಐದು ವರ್ಷದ ಹಿಂದೆ ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆಗೆ ಸಂಬಂಧಿಸಿದಂತೆ ಸೋದರ ಮಾವನ ಮಗನಾಗಿರುವ ಉಮೇಶಗೆ ಯುವತಿ ಸಹಾಯ ಕೇಳಿದ್ದಳು. ಆಗ ಉಮೇಶ್ ಇಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ, ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಈ ಘಟನೆ ಹಿನ್ನೆಲೆಯಲ್ಲಿ ದಾವಣಗೆರೆ ಪೂರ್ ವಲಯ ಐಜಿಪಿ ತ್ಯಾಗರಾಜನ್ ಅವರು, ಸಿಪಿಐ ಉಮೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!