ಅತ್ಯಾಚಾರ ಪ್ರಕರಣ: ಸಿಂದಗಿಯಲ್ಲಿ ಎಬಿವಿಪಿಯಿಂದ ಪ್ರತಿಭಟನೆ

418

ಪ್ರಜಾಸ್ತ್ರ ಸುದ್ದಿ

ಸಿಂದಗಿ: ರಾಜ್ಯಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಘಟನೆಗಳನ್ನು ಹಾಗೂ ಇತ್ತೀಚೆಗೆ ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ, ತಾಲೂಕು ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ, ಪಟ್ಟಣದ ಆರ್.ಡಿ ಪಾಟೀಲ ಕಾಲೇಜಿನಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹೆಣ್ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದರು.

ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸುತ್ತಿರುವುದು

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಎಬಿವಿಪಿ ನಗರ ಕಾರ್ಯದರ್ಶಿ ಸುಮಾ ನಿರಣಿ, ಬೀರು ಪೂಜಾರಿ, ಜಿಲ್ಲಾ ಎಸ್ಎಫ್ ಡಿ ಸಹ ಪ್ರಮುಖ ಪ್ರಕಾಶ ಅಗಸರ, ತಾಲೂಕು ಸಂಚಾಲಕ ಭಾಗೇಶ ಭೀಮನಳ್ಳಿ, ಸಂತೋಶ ನಂದಗೇರಿ, ಭಾಗೇಶ ಹೂಗಾರ, ಶ್ರೀಧರ ಭಜಂತ್ರಿ, ವಿನೋದ ಬಡಿಗೇರ, ಶಂಕರ ಭಜಂತ್ರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!