ಪ್ರಜಾಸ್ತ್ರ ಸುದ್ದಿ
ಮುಂಬೈ: ಮಹಾರಾಷ್ಟ್ರ ಸರ್ಕಾರದ ಸಚಿವ ಧನಂಜಯ ಮುಂಡೆ ವಿರುದ್ಧ ಅತ್ಯಾಚಾರದ ಪ್ರಕರಣವೊಂದು ದಾಖಲಾಗಿದೆ. ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರು ನೀಡಿದ್ದು, ಅಲ್ದೇ, ತಮ್ಮ ಟ್ವೀಟರ್ ನಲ್ಲಿ ಅದನ್ನ ಶೇರ್ ಮಾಡಿದ್ದಾರೆ.
ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ಸಚಿವ ಮುಂಡೆ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ಹಿಂದೆಯೇ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನನ್ಗೆ ಜೀವ ಭಯ ಸಹ ಇದೆ. ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಮುಂಡೆ, ಇದೊಂದು ಬ್ಲ್ಯಾಕ್ ಮೇಲ್ ತಂತ್ರವಾಗಿದೆ ಎಂದು ಹೇಳಿದ್ದಾರೆ.