ಪಿಜಿ ಮಾಲೀಕನಿಂದ ಯುವತಿ ಮೇಲೆ ಅತ್ಯಾಚಾರ!

349

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಪಿಜಿ ಮಾಲೀಕನೊಬ್ಬ ರಿವಾಲ್ವಾರ್ ತೋರಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ದೂರು ದಾಖಲಾಗಿದೆ. ವಿದ್ಯಾಭ್ಯಾಸಕ್ಕೆ ಬಂದ ಯುವತಿ ಪಿಜಿಯಲ್ಲಿ ವಾಸವಾಗಿದ್ದಾಳೆ. ಅದರ ಮಾಲೀಕ ರಿವಾಲ್ವಾರ್ ತೋರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಹಾರ ಮೂಲದ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್ ಎಂಬಾತ ಟೈಲ್ಸ್ ವ್ಯಾಪಾರ ಮಾಡುತ್ತಿದ್ದ. ಇತನ ಒಡೆತನದ ಪಿಜಿಯಲ್ಲಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿದ ದೂರು ದಾಖಲಾಗಿದ್ದು, ಆತನನ್ನು ಬಂಧಿಸಿ ರಿವಾಲ್ವಾರ್ ಜಪ್ತಿ ಮಾಡಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಒಪ್ಪಿಸಿ ಮೂರು ದಿನ ಕಸ್ಟಡಿಗೆ ಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!